mail-img print-img

ನಾನು ಕುರಿ, ನನ್ನ ಮಗ ಕುರಿ ಮರಿ: ಸಚಿವ ರಾಮಚಂದ್ರ ಗೌಡ

ಶನಿವಾರ - ಸೆಪ್ಟೆಂಬರ್ -04-2010

ವೈದ್ಯಕೀಯ ಕಾಲೇಜು ನೇಮಕಾತಿ ಅವ್ಯವಹಾರ

 

ಬೆಂಗಳೂರು, ಸೆ. 3: ಹಾಸನ ವೈದ್ಯ ಕೀಯ ಕಾಲೇಜು ನೇಮಕಾತಿ ಅವ್ಯವ ಹಾರದಲ್ಲಿ ವೈದ್ಯಕೀಯ ಸಚಿವ ಮತ್ತು ಪುತ್ರ ಭಾಗಿಯಾಗಿದ್ದಾರೆ ಎಂಬ ಆರೋ ಪದ ಕುರಿತು ಪ್ರತಿಕ್ರಿಯಿಸಿರುವ ಸಚಿವ ರಾಮಚಂದ್ರಗೌಡ, ‘ನಾನು ಕುರಿ, ನನ್ನ ಮಗ ಕುರಿ ಮರಿ. ನಮ್ಮನ್ನು ತೋಳಗಳು ಭೇಟೆಯಾಡಲು ಮುಂದಾಗಿದೆ’ ಎಂದು ಪರೋಕ್ಷವಾಗಿ ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ವಿರುದ್ಧ ಗುಡುಗಿದ್ದಾರೆ.

ಹಾಸನದ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ಸಂದರ್ಭದಲ್ಲಿ ನಡೆದಿರುವ ಅವ್ಯವಹಾರದ ಕುರಿತು ನಿನ್ನೆ ಎಚ್.ಡಿ.ರೇವಣ್ಣ, ಉದ್ಯೋಗ ವಂಚಿ ರೊಂದಿಗೆ ಸೇರಿಕೊಂಡು ಸುದ್ದಿಗೋಷ್ಠಿ ನಡೆಸಿ, ವೈದ್ಯಕೀಯ ಸಚಿವ ರಾಮಚಂದ್ರ ಗೌಡರ ಮತ್ತು ಅವರ ಪುತ್ರನ ವಿರುದ್ಧ ಬಾಂಬ್ ಒಂದನ್ನು ಸಿಡಿಸಿದ್ದರು.

ಇದರಿಂದ ಸಿಡಿಮಿಡಿಗೊಂಡಿರುವ ರಾಮಚಂದ್ರ ಗೌಡ, ರೇವಣ್ಣ ಮತ್ತಿತರರು ತೋಳ ಗಳಂತೆ ನಮ್ಮ ಮೇಲೆ ವಿನಾ ಕಾರಣ ಮುಗಿಬೀಳುತ್ತಿದ್ದಾರೆ ಎಂದು ಆರೋಪಿಸಿದರು.

ಶುಕ್ರವಾರ ನಗರದ ಅರಮನೆ ಮೈದಾನದಲ್ಲಿ ನಡೆದ ಭಾರತದ ಬೃಹತ್ ಆಹಾರ ತಾಂತ್ರಿಕ ಮೇಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಅವ್ಯವಹಾರ ನ್ಯಾಯಾಲಯದ ಆವರಣದಲ್ಲಿರುವುದರಿಂದ ಇದರ ಕುರಿತು ಇನ್ನೇ ನನ್ನು ಹೇಳಲು ಬಯಸುವುದಿಲ್ಲ ಎಂದ ಅವರು, ನೇಮಕಾತಿಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆದಿಲ್ಲ ಎಂದು ಹೇಳಿದರು.

ಈ ಅವ್ಯವಹಾರ ಆರೋಪದ ಕುರಿತು ಮುಖ್ಯಮಂತ್ರಿ ನೇಮಕ ಮಾಡಿರುವ ತನಿಖಾಧಿಕಾರಿಗಳಿಗೆ ತಮ್ಮ ಇಲಾಖೆಯ ಅಧಿಕಾರಿಗಳು ಎಲ್ಲ ರೀತಿಯಿಂದಲೂ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ನೇಮಕಾತಿಯಲ್ಲಿ ಕೇಳಿ ಬರುತ್ತಿರುವ ಆರೋಪಗಳು ನಿರಾಧಾರ ಎಂದು ಹೇಳಿದರು.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಮೂರೂ ಬಿಟ್ಟವರು ಊರಿಗೆ ದೊಡ್ಡವರು

ದೇಶದ ಮುಂದೆ ನಾಡು ತಲೆತಗ್ಗಿಸುವಂತಹ ಘಟನೆ ರಾಜ್ಯದ ಸದನದಲ್ಲಿ ನಡೆದಿದೆ. ನಾಡಿನ ಇಬ್ಬರು ಸಚಿವರು ಸದನದಲ್ಲೇ ತಮ್ಮ ಮೊಬೈಲ್ ಮೂಲಕ ಬ್ಲೂಫಿಲಂ ನೋಡಿ, ಜನತೆಯ ಮುಂದೆ ರೆಡ್‌ಹ ...


ನಿಮ್ಮ ಅನಿಸಿಕೆ

postClick here to post your views
EPAPER
access

ಬಡವರ ಮಕ್ಕಳಿಗೆ ನಿರಾಕರಿಸಲ್ಪಟ್ಟ ಶಿಕ್ಷಣ

ಶಿಕ್ಷಣದ ಹಕ್ಕು ನಮ್ಮ ಸಂವಿಧಾನದಲ್ಲಿ ಮೂಲಭೂತ ಹಕ್ಕು ಅಲ್ಲ. ನಮ್ಮ ದೇಶದಲ್ಲಿ ಒಂದು ಲಕ್ಷಕ್ಕೂ ಹ ...


- ಎಸ್.ಬಾಲನ್,ಹೈಕೋರ್ಟ್ ವಕೀಲರು, ಬೆಂಗಳೂರು.

ಯಶಸ್ವಿ ರಂಗ ಪ್ರಯೋಗ ನೀಡುವ ಆತ್ಮೋಲ್ಲಾಸ

ಮುಂಬೈ ಚುಕ್ಕಿ ಸಂಕುಲದ ಗೆಳೆಯರ ಬಳಗ ಪ್ರಸ್ತುತ ಪಡಿಸಿದ ನಾಟಕ ‘ಕುವೆಂಪು ಕಂಡ ಮಂಥರೆ’ ಮುಂಬ ...


- ಗೋಪಾಲ್ ತ್ರಾಸಿ

ಅಂತರ ಜಾತಿಯ ವಿವಾಹ ಮೀಸಲಾತಿಗೆ ಅಡ್ಡಿಯಾಗದು: ಸರ್ವೋಚ್ಚ ನ್ಯಾಯಾಲಯದ ತೀರ್ಪು

ಒಂದಲ್ಲ ಒಂದು ಕಾರಣದಿಂದ ಸಮಾಜದಲ್ಲಿ ಬೇರೂರಿರುವ ಅಸಮಾನತೆಯನ್ನು ಹೋಗಲಾಡಿಸಲು ಕೇಂದ್ರ ಮತ್ತು ರ ...


- ಕೆ. ದೇಜಪ್ಪ

ಆರೆಸ್ಸೆಸ್ ಶಿಸ್ತಿನ ಒಳಗುಟ್ಟು

ಹುಬ್ಬಳ್ಳಿಯಲ್ಲಿ ನಡೆದ ಆರೆಸ್ಸೆಸ್‌ನ ಹಿಂದೂಶಕ್ತಿ ಸಂಗಮ ಕಂಡು ರೋಮಾಂಚಿತಗೊಂಡ ಸ್ನೇಹಿತರ ...


- ಸನತ್‌ ಕುಮಾರ ಬೆಳಗಲಿ

ನಿನ್ನನ್ನು ಒಳ್ಳೆಯ ಬ್ಯಾರಿ ಅಂತ ಹೇಗೆ ನಂಬುವುದು?

‘ಕರಾವಳಿಯಲ್ಲಿ ಒಳ್ಳೆಯ ಬ್ಯಾರಿಗಳೂ ಇದ್ದಾರೆ ಗೊತ್ತುಂಟಾ... ಗೋ ಸಮಾವೇಶ ಮಾಡಿದ ಹಾಗೆ ನಾವು ಮ ...


- ಚೇಳಯ್ಯ

ವಿವೇಕಾನಂದರ ವಾರಸುದಾರರು ಕೋಮುವಾದಿಗಳಲ್ಲ-ಪ್ರಗತಿಪರರು

ಆಧುನಿಕ ತತ್ವಶಾಸದ ಇತಿಹಾಸದಲ್ಲಿ ಸ್ವಾಮಿ ವಿವೇಕಾನಂದರಿಗೆ ಪ್ರಮುಖವಾದ ಸ್ಥಾನವಿದೆ.ವೇದಾಂತ ...


- ಡಾ ಜಿ. ಭಾಸ್ಕರ ಮಯ್ಯ

ಮನಸ್ಸಿನ ಅಸ್ವಸ್ಥತೆಗೆ ಮೂಲ ಕಾರಣ ಹುಡುಕಬೇಕು

ನಾನು ಮನೋವೈದ್ಯೆಯಲ್ಲ.ಆದರೆ ಮನಸ್ಸನ್ನು ಪ್ರೀತಿಸುವುದರಿಂದ ಮಾತ್ರ ಈ ಪ್ರಕರಣದ ವಿಶ್ಲೇಷಣೆ ನನ ...


- ಜ್ಯೋತಿ ಗುರುಪ್ರಸಾದ್

ದೂರಸಂಪರ್ಕ ನೀತಿ ಬೇಕಾಗಿದೆ

ಕಳೆದ ಕೆಲವು ದಿನಗಳಿಂದ ಟೆಲಿವಿಶನ್ ಉದ್ದಿಮೆಯ ಪ್ರಬಲೀಕರಣ ಕುರಿತ ವಿಷಯ ವಾಣಿಜ್ಯ ಸುದ್ದ ...


- ಅರವಿಂದ ರಾಜಗೋಪಾಲ