mail-img print-img

ವಿರೋಧದ ನಡುವೆ ಗೋಹತೆ್ಯ ನಿಷೇಧ ಕಾಯೆ್ದಗೆ ಅಂಗೀಕಾರ

ಶನಿವಾರ - ಮಾರ್ಚ್ -20-2010


 ಬೆಂಗಳೂರು, ಮಾ. 19: ತೀವ್ರ ಗದ್ದಲ ಮತ್ತು ವಿರೋಧದ ನಡುವೆಯೂ ರಾಜ್ಯದಲ್ಲಿ ಸಂಪೂರ್ಣ ಗೋಹತ್ಯೆಯನ್ನು ನಿಷೇಧಿಸುವ ಕಾಯ್ದೆಗೆ ರಾಜ್ಯ ಸರಕಾರ ವಿಧಾನಸಭೆಯಲ್ಲಿ ಶುಕ್ರವಾರ ಧ್ವನಿಮತದ ಅಂಗೀಕಾರ ಪಡೆದುಕೊಂಡಿದೆ.


 ಪ್ರತಿಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್‌ನ ಶಾಸಕರು ಸಭಾಧ್ಯಕ್ಷರ ಮುಂದಿನ ಬಾವಿಗಿಳಿದು ಧರಣಿ ನಡೆಸುತ್ತಿದ್ದಾಗ್ಯೂ ಲೆಕ್ಕಿಸದೆ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2010’ನ್ನು ಧ್ವನಿಮತಕ್ಕೆ ಹಾಕಿದರು. ಇದನ್ನು ವಿರೋಧಿಸಿ ಧರಣಿ ನಿರತರು ವಿಧೇಯಕದ ಪ್ರತಿಯನ್ನು ಹರಿದು ವಿಧಾನಸಭೆಯಲ್ಲಿ ತೂರಾಡಿದರು. ಆಡಳಿತ ಮತ್ತು ಪ್ರತಿಪಕ್ಷಗಳ ಶಾಸಕರ ನಡುವೆ ಮಾತಿನ ಚಕಮಕಿ ವ್ಯಾಪಕವಾಗಿತ್ತು. ಆದಾಗ್ಯೂ ವಿಧೇಯಕ ಅಂಗೀಕಾರಗೊಂಡು ಕಾಯ್ದೆಯಾಗಿದೆ ಎಂದು ಸಭಾಧ್ಯಕ್ಷರು ಘೋಷಣೆ ಮಾಡಿದರು. ಪ್ರತಿಪಕ್ಷಗಳ ಶಾಸಕರು, ‘ಬಹುಸಂಖ್ಯಾತರ ಆಹಾರ ಪದ್ಧತಿಯನ್ನು ಕಸಿದುಕೊಳ್ಳಲು ಮುಂದಾಗಿರುವ ಕೋಮುವಾದಿ ಸರಕಾರಕ್ಕೆ ಧಿಕ್ಕಾರ. ರೈತ ವಿರೋಧಿ ಮತ್ತು ಜನ ವಿರೋಧಿ ಸರಕಾರಕ್ಕೆ ಧಿಕ್ಕಾರ’ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸದನದ ನಡಾವಳಿಗಳು ಸಂವಿಧಾನ ಬದ್ಧವಾಗಿ ನಡೆಯುತ್ತಿಲ್ಲ. ಸದಸ್ಯರ ಅಭಿಪ್ರಾಯವನ್ನು ಪರಿಗಣಿಸದೆ ಸಂವಿಧಾನ ಬಾಹಿರವಾಗಿ ಮಸೂದೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಪ್ರತಿಪಕ್ಷಗಳ ಸದಸ್ಯರು ದೂರಿದರು.

  ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2010’ವನ್ನು ಪಶುಸಂಗೋಪನಾ ಸಚಿವ ರೇವು ನಾಯಕ್ ಬೆಳಮಗಿ ಭೋಜನ ವಿರಾಮದ ನಂತರ ಸದನಕ್ಕೆ ಪರಿಚಯಿಸಿದರು. ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ವಿಧೇಯಕವನ್ನು ಧ್ವನಿಮತದ ಮೂಲಕ ಅಂಗೀಕರಿಸಿದರು.

 ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕದ ಕುರಿತು ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ಮುಖಂಡ ಸಿದ್ಧರಾಮಯ್ಯ, ರಾಜ್ಯ ಸರಕಾರ ಅಸಂವಿಧಾನಿಕವಾಗಿ ಸಂಪೂರ್ಣ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲು ಮುಂದಾಗಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಬಹುಸಂಖ್ಯಾತರ ಆಹಾರ ಪದ್ಧತಿಯ ಮೇಲೆ ದಾಳಿ ಮಾಡಲು ಸರಕಾರ ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

  ಗೋವಿನ ಗಂಜಳ, ಸೆಗಣಿಯ ಗಂಧ-ಗಾಳಿ ಅರಿಯದ ಜನರು ಈ ಕಾಯ್ದೆ ಜಾರಿಗೆ ತರಲು ಹುನ್ನಾರ ನಡೆಸಿದ್ದಾರೆ. ಒಂದು ಸಮುದಾಯದ ಮೇಲೆ ದ್ವೇಷ ಸಾಧಿಸುವ ಉದ್ದೇಶದಿಂದ ಮಸೂದೆಯನ್ನು ತರಾತುರಿಯಲ್ಲಿ ತರಲಾಗುತ್ತಿದೆ. ಇದರಿಂದ ಚರ್ಮೋದ್ಯಮದ ಮೇಲೆ ಆಧಾರವಾಗಿರುವ ಜನರು ನಿರುದ್ಯೋಗಿಗಳಾಗುತ್ತಾರೆ. ಮಸೂದೆಯಲ್ಲಿ ಅವರಿಗೆ ಯಾವುದೇ ಪರ್ಯಾಯಗಳನ್ನು ಸೂಚಿಸಿಲ್ಲ ಎಂದು ಸಿದ್ಧರಾಮಯ್ಯ ಆಕ್ಷೇಪಿಸಿದರು. ದೇಶದ ಯಾವುದೇ ರಾಜ್ಯದಲ್ಲಿಯೂ ಇಲ್ಲದ ಮಸೂದೆಯನ್ನು ಬಿಜೆಪಿ ಸರಕಾರ ಜಾರಿಗೆ ತರಲುವ ಮೂಲಕ ಹಿಟ್ಲರ್ ರಾಜ್ಯ ಸ್ಥಾಪಿಸುವ ಹುನ್ನಾರ ನಡೆಸಿದೆ. ಇದರಿಂದ ರಾಜ್ಯದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣ ವಾಗುತ್ತದೆ. ರಾಜ್ಯದಲ್ಲಿನ ಸೌಹಾರ್ದಕ್ಕೆ ಧಕ್ಕೆಯುಂಟಾಗುತ್ತದೆ. ಈಗಾಗಲೇ ಆತಂಕದಲ್ಲಿ ಬದುಕು ನಡೆಸುತ್ತಿರುವ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಸರಕಾರ ಮಸೂದೆ ಜಾರಿಗೆ ತರುತ್ತಿದೆ. ಇದರ ವಿರುದ್ಧ ಜನರು ಸಿಡಿದೇಳುತ್ತಾರೆ. ಸರಕಾರ ಮಸೂದೆಯನ್ನು ಹಿಂಪಡೆಯಬೇಕು ಎಂದು ಅವರು ಬಲವಾಗಿ ಸಿದ್ಧರಾಮಯ್ಯ ಆಗ್ರಹಿಸಿದರು.

 ಜನರು ಕಾಯ್ದೆಯನ್ನು ವಿರೋಧಿಸಿ ತೀವ್ರ ಸ್ವರೂಪದ ಪ್ರತಿಭಟನೆ ನಡೆಸುತ್ತಿದ್ದಾರೆ. ಸರಕಾರ ಜನರ ಭಾವನೆಗಳಿಗೆ ಗೌರವ ಕೊಡಬೇಕು. ತಮ್ಮ ಗುಪ್ತ ಕಾರ್ಯಸೂಚಿಯನ್ನು ಜಾರಿಗೆ ತರಲು, ಸಂಘ ಪರಿವಾರದವರನ್ನು ತಪ್ತಿಗೊಳಿಸುವ ಸಲುವಾಗಿ ಬಿಜೆಪಿ ಈ ಕಾಯ್ದೆ ಜಾರಿಗೊಳಿಸುತ್ತಿದೆ ಎಂದು ಸಿದ್ದರಾಮಯ್ಯ ಟೀಕಿಸಿದರು. ಕಾಯ್ದೆಗೆ ಅಂಗೀಕಾರ ದೊರೆತ ನಂತರರೂ ಗದ್ದಲ ಮುಂದುವರಿದ್ದರಿಂದ ಸಭಾಧ್ಯಕ್ಷರು ಕಲಾಪವನ್ನು ಅನಿದಿಷ್ಟಾವಧಿಗೆ ಮುಂದೂಡಿದರು.

 ಸದನದ ಹೊರಗೆ ಮಾತನಾಡಿದ ಸಿದ್ದರಾಮಯ್ಯ, ಕಾಯ್ದೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಹೇಳಿದರಲ್ಲದೆ, ಸರಕಾರ ಕಳುಹಿಸುವ ಕಾಯ್ದೆಗೆ ಸಹಿ ಹಾಕದಂತೆ ರಾಜ್ಯಪಾಲರಿಗೆ ದೂರು ನೀಡುವುದಾಗಿ ತಿಳಿಸಿದರು.


ನಾಯಕರ ಅಭಿಪ್ರಾಯಗಳು...

 ಎಲ್ಲರಿಗೂ ಹಾಲು ಕೊಡುವ ಗೋ ಮಾತೆಯ ರಕ್ಷಣೆಯಾಗಬೇಕಿದೆ. ಈ ಮೊದಲು ಜಾರಿಯಲ್ಲಿದ್ದ 1964ರ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯಲ್ಲಿ ಒಂದು ಸಾವಿರ ರೂಪಾಯಿ ದಂಡ ಮತ್ತು ಆರು ತಿಂಗಳು ಶಿಕ್ಷೆಯಿತ್ತು. ಅದನ್ನು ಹೆಚ್ಚಿಸಿ 50 ಸಾವಿರ ರೂಪಾಯಿಗಳವರೆಗೆ ದಂಡ ಮತ್ತು 7 ವರ್ಷಗಳವರೆಗೆ ಶಿಕ್ಷೆ ವಿಧಿಸಲು ಅವಕಾಶ ನೀಡಲಾಗಿದೆ. ಸಕ್ಷಮ ಪ್ರಾಧಿಕಾರಿಯನ್ನಾಗಿ ತಹಸಿಲ್ದಾರ್‌ರನ್ನು ನಿಯೋಜಿಸಲಾಗಿದೆ. ತನಿಖೆ ಮತ್ತು ತಪಾಸಣೆಯ ಅಧಿಕಾರವನ್ನು ಪಿಎಸ್‌ಐಗೆ ನೀಡಲಾಗಿದೆ. ಉಪವಿಭಾಗಾಧಿಕಾರಿ, ಅನಂತರ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬಹುದಾಗಿದೆ

-ಸಚಿವ ರೇವುನಾಯಕ ಬೆಳಮಗಿ


ನೂತನ ಕಾಯ್ದೆ ದನದ ಜಾತ್ರೆಗಳಿಗೆ ಜಾನುವಾರುಗಳನ್ನು ಸಾಗಿಸುವುದನ್ನು ಅಪರಾಧವೆಂದು ಪರಿಗಣಿಸುತ್ತದೆ. ಗೋಹತ್ಯೆ ನಿಷೇಧವಾದರೆ ಕುರಿ, ಕೋಳಿ ಮಾಂಸದ ಬೆಲೆ ಗಗನಕ್ಕೇರಿ ಸಾಮಾನ್ಯರಿಗೆ ಎಟುಕದಂತಾಗುತ್ತದೆ.

-ಕಾಂಗ್ರೆಸ್‌ನ ಟಿ.ಬಿ.ಜಯಚಂದ್ರ


 ಗೋಹತ್ಯೆ ನಿಷೇಧ ಕಾಯ್ದೆಗೆ ಮುಸಲ್ಮಾನರು ಎಂದೂ ವಿರೋಧ ವ್ಯಕ್ತಪಡಿಸಿಲ್ಲ. ದನದ ಮಾಂಸವನ್ನು ಮುಸಲ್ಮಾನರು ಮಾತ್ರ ತಿನ್ನುವುದಲ್ಲ. ದನದ ಮಾಂಸ ರಫ್ತು ಮಾಡುವವರು ಮುಸಲ್ಮಾನರಲ್ಲ. ಉತ್ತರ ಪ್ರದೇಶದಲ್ಲಿ ಬಹತ್ ಗಾತ್ರದ ಗೋಮಾಂಸ ಶೀಥಲೀಕರಣ ಘಟಕದ ಪಾಲುದಾರರು ಬಿಜೆಪಿಯ ಹಿರಿಯ ಮುಖಂಡರು ಮತ್ತು ಆ ರಾಜ್ಯದ ಮಾಜಿ ಮುಖ್ಯಮಂತ್ರಿ ಎಂಬುದನ್ನು ಮರೆಯಬೇಡಿ.

-ಕಾಂಗ್ರೆಸ್‌ನ ರೋಷನ್‌ಬೇಗ್


ಜಾನುವಾರು ಹತ್ಯೆ ಪ್ರತಿಬಂಧಕ 1964ರ ಕಾಯ್ದೆ ಉದ್ದೇಶವನ್ನು ಈಡೇರಿಸುವಲ್ಲಿ ವಿಫಲವಾಗಿತ್ತು. ಅದಕ್ಕಾಗಿ ಜಾನುವಾರು ಎಂಬ ಪದಕ್ಕೆ ಸ್ಪಷ್ಟ ಅರ್ಥ ನೀಡುವ ಮತ್ತು ಉದ್ದೇಶ ಹಾಗೂ ಶಿಕ್ಷೆಯ ಬಗ್ಗೆ ಸ್ಪಷ್ಟತೆ ಇರುವ 2010ರ ಕಾಯ್ದೆಯನ್ನು ರೂಪಿಸಲಾಗಿದೆ.

-ಗಹ ಸಚಿವ ವಿ.ಎಸ್.ಆಚಾರ್ಯ


ಹಿಂದೂಗಳು ಹಂದಿಯನ್ನೂ ‘ವರಹ’ ಎಂದು ಪೂಜಿಸುತ್ತಾರೆ. ಹಾಗಿದ್ದರೆ ಹಂದಿ ಹತ್ಯೆಯನ್ನು ನಿಷೇಧಿಸಿ. ಪ್ರಾಚೀನ ಕಾಲದಲ್ಲಿ ಬ್ರಾಹ್ಮಣರು ದನದ ಮಾಂಸವನ್ನು ತಿನ್ನತ್ತಿದ್ದರು. ಮನೆಗೆ ಅತಿಥಿಗಳು ಬಂದಾಗ ಕೊಬ್ಬಿದ ದನವನ್ನು ಕಡಿದು ಭಕ್ಷ ತಯಾರಿಸುತ್ತಿದ್ದರು. ಬಿಜೆಪಿಯವರು ನಂಬುವ ಸ್ವಾಮೀ ವಿವೇಕಾನಂದರೇ ಒಮ್ಮೆ ‘ದನ ತಿನ್ನದವ ಉತ್ತಮ ಹಿಂದುವಾಗಿರಲು ಸಾಧ್ಯವಿಲ್ಲ ಎಂದು ಹೇಳಿದ್ದರು’

-ಕಾಂಗ್ರೆಸ್‌ನ ಡಿ.ಕೆ.ಶಿವಕುಮಾರ್


ಕುರಿ ಮಾಂಸ ಸಾಗಾಣಿಕೆ ಮಾಡಿದರೂ ಬಂಧಿಸುವ ಈ ಕಾಯ್ದೆ ಬೇಕಿದೆಯೇ? ಕಾಯ್ದೆ ಜಾರಿಯಾದರೆ ಇತರ ಮಾಂಸದ ಬೆಲೆ 4 ಪಟ್ಟು ಹೆಚಾಗಲಿದೆ. ಅಲ್ಪಸಂಖ್ಯಾತರು, ಬಡವರು ತೊಂದರೆಗೆ ಒಳಗಾಗುತ್ತಾರೆ. ಮುಂದಿನ ದಿನಗಳಲ್ಲಿ ಇದರ ವಿರುದ್ಧ ತೀವ್ರತರವಾದ ಚಳವಳಿ ನಡೆಯಲಿದೆ.

ಜೆಡಿಎಸ್ ಸದಸ್ಯ ಬಂಡೇಪ್ಪ ಕಾಶೇಂಪುರ್


Careers Talk
Mohd Ali
20th March 2010, 10:51 a.m.

ಇದು ಅತ್ಯಂತ ಕ್ರೂರ ಮತ್ತು ಸಮೂಹ ವಿರೋಧಿ ಕಾನೂನು ಇದನ್ನು ಮಾನವೀಯತೆ ಇರುವ ಎಲ್ಲರು ವಿರೋಧಿಸಬೇಕಾಗಿದೆ.


ali
20th March 2010, 11:02 a.m.

‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕದ ಕುರಿತು ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ಮುಖಂಡ ಸಿದ್ಧರಾಮಯ್ಯ, ರಾಜ್ಯ ಸರಕಾರ ಅಸಂವಿಧಾನಿಕವಾಗಿ ಸಂಪೂರ್ಣ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲು ಮುಂದಾಗಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಬಹುಸಂಖ್ಯಾತರ ಆಹಾರ ಪದ್ಧತಿಯ ಮೇಲೆ ದಾಳಿ ಮಾಡಲು ಸರಕಾರ ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ali
20th March 2010, 11:03 a.m.

ಹಿಂದೂಗಳು ಹಂದಿಯನ್ನೂ ‘ವರಹ’ ಎಂದು ಪೂಜಿಸುತ್ತಾರೆ. ಹಾಗಿದ್ದರೆ ಹಂದಿ ಹತ್ಯೆಯನ್ನು ನಿಷೇಧಿಸಿ. ಪ್ರಾಚೀನ ಕಾಲದಲ್ಲಿ ಬ್ರಾಹ್ಮಣರು ದನದ ಮಾಂಸವನ್ನು ತಿನ್ನತ್ತಿದ್ದರು. ಮನೆಗೆ ಅತಿಥಿಗಳು ಬಂದಾಗ ಕೊಬ್ಬಿದ ದನವನ್ನು ಕಡಿದು ಭಕ್ಷ ತಯಾರಿಸುತ್ತಿದ್ದರು. ಬಿಜೆಪಿಯವರು ನಂಬುವ ಸ್ವಾಮೀ ವಿವೇಕಾನಂದರೇ ಒಮ್ಮೆ ‘ದನ ತಿನ್ನದವ ಉತ್ತಮ ಹಿಂದುವಾಗಿರಲು ಸಾಧ್ಯವಿಲ್ಲ ಎಂದು ಹೇಳಿದ್ದರು’


ali
20th March 2010, 11:11 a.m.

ಕರ್ನಾಟಕ ಸರಕಾರವು ಸಂಘ ಪರಿವಾರಕ್ಕೆ ಮಣಿದು ಗೋ ಹತ್ಯೆ ನಿಷೇಧವನ್ನು ಜಾರಿಗೆ ತಂದಿದೆ. ಸಾಮಾನ್ಯ ಜನರನ್ನು ರಕ್ಷಿಸಲು ಸಾಧ್ಯವಾಗದ ಸರಕಾರವು ಇದೀಗ ಜನರ ಆಹಾರ ಪಧ್ಧತಿಯನ್ನು ನಿಷೆಧಿಸಿದೆ.


Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಮೂರೂ ಬಿಟ್ಟವರು ಊರಿಗೆ ದೊಡ್ಡವರು

ದೇಶದ ಮುಂದೆ ನಾಡು ತಲೆತಗ್ಗಿಸುವಂತಹ ಘಟನೆ ರಾಜ್ಯದ ಸದನದಲ್ಲಿ ನಡೆದಿದೆ. ನಾಡಿನ ಇಬ್ಬರು ಸಚಿವರು ಸದನದಲ್ಲೇ ತಮ್ಮ ಮೊಬೈಲ್ ಮೂಲಕ ಬ್ಲೂಫಿಲಂ ನೋಡಿ, ಜನತೆಯ ಮುಂದೆ ರೆಡ್‌ಹ ...


ನಿಮ್ಮ ಅನಿಸಿಕೆ

postClick here to post your views
EPAPER
access

ಬಡವರ ಮಕ್ಕಳಿಗೆ ನಿರಾಕರಿಸಲ್ಪಟ್ಟ ಶಿಕ್ಷಣ

ಶಿಕ್ಷಣದ ಹಕ್ಕು ನಮ್ಮ ಸಂವಿಧಾನದಲ್ಲಿ ಮೂಲಭೂತ ಹಕ್ಕು ಅಲ್ಲ. ನಮ್ಮ ದೇಶದಲ್ಲಿ ಒಂದು ಲಕ್ಷಕ್ಕೂ ಹ ...


- ಎಸ್.ಬಾಲನ್,ಹೈಕೋರ್ಟ್ ವಕೀಲರು, ಬೆಂಗಳೂರು.

ಯಶಸ್ವಿ ರಂಗ ಪ್ರಯೋಗ ನೀಡುವ ಆತ್ಮೋಲ್ಲಾಸ

ಮುಂಬೈ ಚುಕ್ಕಿ ಸಂಕುಲದ ಗೆಳೆಯರ ಬಳಗ ಪ್ರಸ್ತುತ ಪಡಿಸಿದ ನಾಟಕ ‘ಕುವೆಂಪು ಕಂಡ ಮಂಥರೆ’ ಮುಂಬ ...


- ಗೋಪಾಲ್ ತ್ರಾಸಿ

ಅಂತರ ಜಾತಿಯ ವಿವಾಹ ಮೀಸಲಾತಿಗೆ ಅಡ್ಡಿಯಾಗದು: ಸರ್ವೋಚ್ಚ ನ್ಯಾಯಾಲಯದ ತೀರ್ಪು

ಒಂದಲ್ಲ ಒಂದು ಕಾರಣದಿಂದ ಸಮಾಜದಲ್ಲಿ ಬೇರೂರಿರುವ ಅಸಮಾನತೆಯನ್ನು ಹೋಗಲಾಡಿಸಲು ಕೇಂದ್ರ ಮತ್ತು ರ ...


- ಕೆ. ದೇಜಪ್ಪ

ಆರೆಸ್ಸೆಸ್ ಶಿಸ್ತಿನ ಒಳಗುಟ್ಟು

ಹುಬ್ಬಳ್ಳಿಯಲ್ಲಿ ನಡೆದ ಆರೆಸ್ಸೆಸ್‌ನ ಹಿಂದೂಶಕ್ತಿ ಸಂಗಮ ಕಂಡು ರೋಮಾಂಚಿತಗೊಂಡ ಸ್ನೇಹಿತರ ...


- ಸನತ್‌ ಕುಮಾರ ಬೆಳಗಲಿ

ನಿನ್ನನ್ನು ಒಳ್ಳೆಯ ಬ್ಯಾರಿ ಅಂತ ಹೇಗೆ ನಂಬುವುದು?

‘ಕರಾವಳಿಯಲ್ಲಿ ಒಳ್ಳೆಯ ಬ್ಯಾರಿಗಳೂ ಇದ್ದಾರೆ ಗೊತ್ತುಂಟಾ... ಗೋ ಸಮಾವೇಶ ಮಾಡಿದ ಹಾಗೆ ನಾವು ಮ ...


- ಚೇಳಯ್ಯ

ವಿವೇಕಾನಂದರ ವಾರಸುದಾರರು ಕೋಮುವಾದಿಗಳಲ್ಲ-ಪ್ರಗತಿಪರರು

ಆಧುನಿಕ ತತ್ವಶಾಸದ ಇತಿಹಾಸದಲ್ಲಿ ಸ್ವಾಮಿ ವಿವೇಕಾನಂದರಿಗೆ ಪ್ರಮುಖವಾದ ಸ್ಥಾನವಿದೆ.ವೇದಾಂತ ...


- ಡಾ ಜಿ. ಭಾಸ್ಕರ ಮಯ್ಯ

ಮನಸ್ಸಿನ ಅಸ್ವಸ್ಥತೆಗೆ ಮೂಲ ಕಾರಣ ಹುಡುಕಬೇಕು

ನಾನು ಮನೋವೈದ್ಯೆಯಲ್ಲ.ಆದರೆ ಮನಸ್ಸನ್ನು ಪ್ರೀತಿಸುವುದರಿಂದ ಮಾತ್ರ ಈ ಪ್ರಕರಣದ ವಿಶ್ಲೇಷಣೆ ನನ ...


- ಜ್ಯೋತಿ ಗುರುಪ್ರಸಾದ್

ದೂರಸಂಪರ್ಕ ನೀತಿ ಬೇಕಾಗಿದೆ

ಕಳೆದ ಕೆಲವು ದಿನಗಳಿಂದ ಟೆಲಿವಿಶನ್ ಉದ್ದಿಮೆಯ ಪ್ರಬಲೀಕರಣ ಕುರಿತ ವಿಷಯ ವಾಣಿಜ್ಯ ಸುದ್ದ ...


- ಅರವಿಂದ ರಾಜಗೋಪಾಲ