mail-img print-img

ಬುರುಡೆ ರಹಸ್ಯ ಬಯಲು

ಶನಿವಾರ - ಸೆಪ್ಟೆಂಬರ್ -04-2010

ಧಾರವಾಡ, ಸೆ. 3: ಇತಿಹಾಸ ತಜ್ಞರು ಮತ್ತು ಸಾರ್ವ ಜನಿಕರಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಜಿಲ್ಲೆಯ ನವಲಗುಂದ ಬಳಿಯ ಅಣ್ಣಿಗೇರಿಯಲ್ಲಿ ಪತ್ತೆಯಾಗಿದ್ದ ಬುರುಡೆಗಳ ರಹಸ್ಯ ಬಹಿರಂಗಗೊಂಡಿದ್ದು, ಸುಮಾರು 600 ವರ್ಷಗಳಷ್ಟು ಹಿಂದಿನವು ಎಂಬ ಅಂಶವನ್ನು ತಜ್ಞರು ಬಹಿರಂಗಪಡಿಸಿದ್ದಾರೆ.

ಅಣ್ಣಿಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಜಮೀನೊಂದರಲ್ಲಿ ಚರಂಡಿ ತೋಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೂರಾರು ತಲೆ ಬುರುಡೆಗಳು ಪತ್ತೆಯಾಗಿದ್ದವು. ಬುರುಡೆಗಳ ಬಗ್ಗೆ ತನಿಖೆ ನಡೆಸಿದ ಹುಬ್ಬಳಿ ಕಿಮ್ಸ್‌ನ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು, ಆರು ನೂರು ವರ್ಷಗಳಷ್ಟು ಹಿಂದೆಯೇ ಅವುಗಳನ್ನು ಹೂಳಲಾಗಿದೆ. ಸಾಮೂಹಿಕ ಹತ್ಯೆ ಮಾಡಿ ತಲೆಗಳನ್ನು ಹೂತಿರುವ ಸಾಧ್ಯತೆಗಳಿವೆ ಎಂದು ತಜ್ಞರು ವರದಿ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ದರ್ಪಣ್ ಜೈನ್ ತಿಳಿಸಿದ್ದಾರೆ.

ನಗರದಲ್ಲಿಂದು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ತಲೆ ಬುರುಡೆಗಳನ್ನು ಯಾವ ಕಾಲದಲ್ಲಿ ಹೂಳಲಾಗಿದೆ ಎಂಬ ಬಗ್ಗೆ ಹೈದರಾಬಾದ್ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಮತ್ತೊಂದು ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಮೂರು ಬುರುಡೆಗಳನ್ನು ಪರೀಕ್ಷಿಸಿದ್ದು, ಎರಡು ಪುರುಷರ ಮತ್ತು ಒಂದು ಮಹಿಳೆಯದ್ದು ಎಂದು ತಿಳಿದು ಬಂದಿದೆ ಎಂದರು.

ಪ್ರಸ್ತುತ ಪತ್ತೆಯಾದ ಸ್ಥಳವನ್ನು ಸಂರಕ್ಷಿತ ಪ್ರದೇಶವೆಂದು ಘೋಷಿಸಿದ್ದು, ಬುರುಡೆ ಪತ್ತೆಯಾದ ಸ್ಥಳವನ್ನು ಸುರಕ್ಷಿತವಾಗಿರಿಸಲಾಗಿದೆ. ಮಳೆಗಾಲವಾದ ಹಿನ್ನೆಲೆಯಲ್ಲಿ ಉತ್ಖನನ ಮಾಡಲು ಅಡ್ಡಿಯಾಗಿದೆ. ಬೇಸಿಗೆಯಲ್ಲಿ ಉತ್ಖನನ ಮಾಡಿ ಅಣ್ಣಿಗೇರಿ ಬುರುಡೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ಪರೀಕ್ಷೆ ನಡೆಸಲಾಗುತ್ತದೆ ಎಂದು ಅವರು ವಿವರ ನೀಡಿದರು.

ಬುರುಡೆ ವೀಕ್ಷಣೆಗೆ ಪ್ರವಾಸಿಗರು: ಬುರುಡೆ ಪತ್ತೆಯಾದ ಸ್ಥಳಕ್ಕೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು, ಅಣ್ಣಿಗೇರಿ ಪ್ರವಾಸಿ ತಾಣವಾಗಿ ಮಾರ್ಪಾಟಾಗಿದೆ. ಈ ಮಧ್ಯೆ ಇತಿಹಾಸ ವಿಷಯದಲ್ಲಿ ಆಸಕ್ತರಾಗಿರುವ ವಿದ್ಯಾರ್ಥಿಗಳು ಕೂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಶಿಲಾಯುಗದ ಸಂಸ್ಕೃತಿ

ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...


ನಿಮ್ಮ ಅನಿಸಿಕೆ

postClick here to post your views
EPAPER
access

ಪ್ರಜೆಗಳ ಕೊರಳು ಹಿಸುಕುವ ಪ್ರಭುತ್ವ

ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...


- ಸನತ್‌ಕುಮಾರ ಬೆಳಗಲಿ

ವ್ಯಂಗ್ಯಚಿತ್ರ ನಿಷೇಧದ ಕುರಿತು ಪ್ರಗತಿಪರರ ನಿಲುವಿಗೆ ಒಂದು ಪ್ರತಿಕ್ರಿಯೆ

ಈ  ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...


- ಮಹಾದೇವ ಹಡಪದ

ಅಂಕಪಟ್ಟಿ ಜೀವನಕ್ಕೆ ಅಂಕದ ಪರದೆ ಎಳೆಯದಿರಲಿ

ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...


- ಜ್ಯೋತಿ ಗುರುಪ್ರಸಾದ್

ಆ ಹುಡುಗಿಯರಲ್ಲಿ ತಾಯ್ತನದ ಹೆಚ್ಚುಗಾರಿಕೆ

ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...


- ಶೂದ್ರ ಶ್ರೀನಿವಾಸ್

ವ್ಯಂಗ್ಯವಿರುವುದು ಇಂದಿನ ಸಂದರ್ಭದಲ್ಲಿ..;ಭಾಗ-1

ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...


- ಶಿವಸುಂದರ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ;ಭಾಗ-7

ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್‌ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-6

ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-5

ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...


- ರಾಕೇಶ್ ಅಂಕಿತ್