
ಮಂಡ್ಯ, ಜ.27: ಮದ್ದೂರು ತಾಲೂಕು ಆಬಲವಾಡಿ ಗ್ರಾಮದ ಸುವರ್ಣಳ ಸಾವಿನ ಪ್ರಕರಣವನ್ನು ಕೆಲವು ಪಟ್ಟಭದ್ರ ಹಿತಾಸಕ್ತಿ ಸಂಘಟನೆಗಳು ದುರುಪಯೋಗಪಡಿಸಿಕೊಳ್ಳುವ ಮೂಲಕ ಸಾಮಾಜಿಕ ಸಂಘರ್ಷಕ್ಕೆ ಅವಕಾಶ ಮಾಡಿಕೊಡುತ್ತಿವೆ ಎಂದು ಆರೋಪಿಸಿ ಒಕ್ಕಲಿಗ ಸಮುದಾಯ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು.
ಸ್ವಾಭಿವಾನಿ ಒಕ್ಕಲಿಗ ಸೇವಾ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸುಮಾರು 7 ಸಾವಿರಕ್ಕೂ ಹೆಚ್ಚು ಮಂದಿ ಕಾಳಿಕಾಂಬ ದೇವಾಲಯದ ಆವರಣದಿಂದ ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ವೌನ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ಮನವಿ ಸಲ್ಲಿಸಿದರು.
ಮಹಿಳೆಯರು ಸೇರಿದಂತೆ ದಲಿತರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ವಿಶೇಷವಾಗಿತ್ತು. ಕೆಲವರು ದ್ವಿಚಕ್ರ ವಾಹನಗಳ ಮೂಲಕವೂ ಮೆರವಣಿಗೆ ನಡೆಸಿದರು. ಕೆಲವು ದಲಿತ, ಪ್ರಗತಿಪರ ಸಂಟನೆಗಳ ಮುಖಂಡರ ವಿರುದ್ಧ ಹಾಗೂ ಸಮಾಜದಲ್ಲಿ ಸಾಮರಸ್ಯ ಮೂಡಿಸಬೇಕೆಂಬ ಘೋಷಣಾ ಲಕಗಳನ್ನು ಪ್ರದರ್ಶಿಸಲಾಯಿತು.
ಸವರ್ಣೀಯ ಯುವತಿ ಸುವರ್ಣಾಳ ಸಾವಿಗೆ ದಲಿತ ಗೋವಿಂದರಾಜು ಮತ್ತವರ ಕುಟುಂಬವೇ ಕಾರಣವಾಗಿದ್ದು, ಈ ಬಗ್ಗೆ ಮುಕ್ತ, ಪಾರದರ್ಶಕ ತನಿಖೆ ನಡೆಸಬೇಕು. ಜತೆಗೆ ಸುವರ್ಣಾಳ ಸಹೋದರ ಸುನಿಲ್‌ನ ಅಸಹಜ ಸಾವಿನ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಪ್ರತಿಭಟನಕಾರರು ಆರೋಪಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾರ್, ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿರುವ ವೇಳೆ ಈ ರೀತಿ ಜಾತಿ ಆಧರಿತ ಪ್ರತಿಭಟನೆಗಳು ನಡೆಯುತ್ತಿ ರುವುದು ವಿಷಾದನೀಯ. ಇನ್ನು ಮುಂದೆ ಈ ರೀತಿಯ ಜಾತಿ ಆಧರಿತ ಪ್ರತಿಭಟನೆಗಳಿಗೆ ಅವಕಾಶವಿಲ್ಲ ಎಂದರು.
ಒಕ್ಕೂಟದ ಪದಾಧಿಕಾರಿಗಳಾದ ಡಾ. ಎಂ.ಎಸ್. ಲೋಕೇಶ್‌ಬಾಬು, ಕೆ.ಎಸ್.ಮಲ್ಲಿಕಾರ್ಜುನ, ನಾಗಣ್ಣ ಬಾಣಸವಾಡಿ ಎಚ್.ಎಂ.ಹೊನ್ನೇಶ್, ಬೊರ್ವೆಲ್ ನಾರಾಯಣ್, ಕರವೇ ಜಿಲ್ಲಾಧ್ಯಕ್ಷ ಎಚ್.ಡಿ.ಜಯರಾಂ, ಮನ್‌ಮುಲ್ ಮಾಜಿ ಅಧ್ಯಕ್ಷ ಚಿಕ್ಕೋನಹಳ್ಳಿ ತಮ್ಮಯ್ಯ, ಬಿಜೆಪಿ ಮುಖಂಡ ಹುರುಗಲವಾಡಿ ಕಷ್ಣೇಗೌಡ, ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ.ಕಷ್ಣಪ್ಪ, ಕದಂಬ ಸೈನ್ಯದ ಉಮ್ಮಡಹಳ್ಳಿ ನಾಗೇಶ್, ಸಹಕಾರ ಯೂನಿಯನ್‌ನ ಎಂ.ಪಿ.ನಾಗರಾಜು ಸೇರಿದಂತೆ ವಿವಿಧ ಪಕ್ಷಗಳ ಮತ್ತು ಇತರ ಸಂಘಟನೆಗಳ ಮುಖಂಡರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ನಮ್ಮ ಶಿಕ್ಷಣ ವ್ಯವಸ್ಥೆಯ ರುದ್ರ ರೂಪವೊಂದು ಹರ್ಯಾಣದ ಅನ್ವಾಂಟ್ ಶಾಲೆಯೊಂದರಲ್ಲಿ ಪ್ರಕಟವಾಗಿದೆ.ಹೋಮ್ ವರ್ಕ್ ಮಾಡದ ಒಂದೇ ಒಂದು ಕಾರಣಕ್ಕಾಗಿ ಎಲ್‌ಕೆಜಿ ವಿದ್ಯ ...
Click here to post your views ಸಾಮ್ರಾಜ್ಯವಾದಿ ದೇಶಗಳಾದ ಅಮೆರಿಕ, ಇಂಗ್ಲೆಂಡ್, ಜರ್ಮನಿ, ಜಪಾನ್... ದೇಶಗಳು ಇಂದು ತೀವ್ರ ಆರ್ಥಿಕ ...
ಅಣ್ಣಾ ಹಝಾರೆಯ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಆರೆಸ್ಸೆಸ್ ಬೆಂಬಲ ನೀಡಿತ್ತು ಎಂದು ಕಳ ...
ನವ ಉದಾರೀಕರಣದ ದುರಾಕ್ರಮಣದ ಈ ಕಾಲದಲ್ಲಿ ಕೋಮುವಾದ ನಾನಾ ವೇಷಧರಿಸಿ ವಕ್ಕರಿಸುತ್ತಿರುವ ಆತಂಕದ ...
ಚಿಕ್ಕಮಗಳೂರು-ಉಡುಪಿ ಕ್ಷೇತ್ರಕ್ಕೆ ಚುನಾವಣೆ ಘೋಷಣೆ ಯಾದುದೇ ಬಿಜೆಪಿ, ಅರ್ಹ ಅಭ್ಯರ್ಥಿಯನ್ನು ಹ ...
‘ಸತ್ಯಂ ಶಿವಂ ಸುಂದರಂ...’ ಎಂಬ ಹಿಂದಿ ಸಿನಿಮಾದ ಈ ಶೀರ್ಷಿಕೆಯ ಹಾಡನ್ನು ಮತ್ತೆ ಮತ್ತೆ ಹಾಡಿಕ ...
ಇತ್ತೀಚೆಗೆ ಎಲ್ಲೆಂದರಲ್ಲಿ ಒಂದು ಬೇಡಿಕೆ ಸಹಜ ವೆಂಬತೆ ಎದ್ದಿದೆ. ಅದು ಸಚಿನ್‌ತೆಂಡೂಲ್ಕರ್‌ಗೆ ಭಾರತ ರತ ...
ಕಳೆದ ಸಂಚಿಕೆಯಲ್ಲಿ ಗಮನಿಸಿದಂತೆ ಪ್ರಾಥಮಿಕ ಶಿಕ್ಷಣದಲ್ಲಿ ಸೌಹಾರ್ದ ಬದುಕು ಮತ್ತು ವೈಜ್ಞ ...
ಕಳೆದ ಸಂಚಿಕೆಯಲ್ಲಿ ಗಮನಿಸಿದಂತೆ ಪ್ರಾಥಮಿಕ ಶಿಕ್ಷಣದಲ್ಲಿ ಸೌಹಾರ್ದ ಬದುಕು ಮತ್ತು ವೈಜ್ಞ ...