ಲಂಕೆಯ ವಿರುದ್ಧ ಭಾರತದ ಅಂಕೆಯಾಟ  ಇಂದು ಎರಡನೆ ಪಂದ್ಯ ವಿಶ್ವಕಪ್ ಬಳಿಕ ಮೊದಲ ಮುಖಾಮುಖಿ
mail-img print-img

ಲಂಕೆಯ ವಿರುದ್ಧ ಭಾರತದ ಅಂಕೆಯಾಟ ಇಂದು ಎರಡನೆ ಪಂದ್ಯ ವಿಶ್ವಕಪ್ ಬಳಿಕ ಮೊದಲ ಮುಖಾಮುಖಿ

ಬುಧವಾರ - ಫೆಬ್ರವರಿ -08-2012

ಪರ್ತ್, ಫೆ.7: ಹತ್ತು ತಿಂಗಳ ಹಿಂದೆ ವಿಶ್ವಕಪ್ ಕ್ರಿಕೆಟ್ ಫೈನಲ್‌ನಲ್ಲಿ ಶ್ರೀಲಂಕಾವನ್ನು ಮಣಿಸಿ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿದ ಭಾರತ ಬುಧವಾರ ಇಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಬ್ಯಾಂಕ್ ತ್ರಿಕೋನ ಸರಣಿಯ ಎರಡನೆ ಪಂದ್ಯದಲ್ಲಿ ಶ್ರೀಲಂಕಾವನ್ನು ಎದುರಿಸಲಿದೆ. ವಿಶ್ವಕಪ್ ಸಮಯದಲ್ಲಿ ಉಭಯ ತಂಡಗಳು ಬಲಿಷ್ಠವಾಗಿತ್ತು. ಆದರೆ ಬಳಿಕ ಭಾರತ ಟೆಸ್ಟ್‌ನಲ್ಲಿ ಸತತ ಎರಡು ಸರಣಿಗಳನ್ನು 0-4 ಅಂತರದಿಂದ ಸೋತು, ವಿದೇಶಿ ಟೂರ್ನಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದೆ.

ಶ್ರೀಲಂಕಾ ತಂಡ ಕೂಡಾ ಮೊದಲಿನಷ್ಟು ಸದೃಢವಾಗಿಲ್ಲ. ಆದರೆ ಸತತ ಎರಡನೆ ಬಾರಿ ಫೈನಲ್ ತಲುಪಿದ್ದರೂ ವಿಶ್ವಕಪ್ ಎತ್ತಲು ವಿಫಲಗೊಂಡ ಲಂಕಾ ತಂಡ ಭಾರತಕ್ಕೆ ತಿರುಗೇಟು ನೀಡುವ ನಿಟ್ಟಿನಲ್ಲಿ ಯೋಚಿಸುತ್ತಿದೆ. ಭಾರತ ಎರಡನೆ ಟ್ವೆಂಟಿ 20 ಪಂದ್ಯದಲ್ಲಿ ಆಸ್ಟ್ರೇಲಿಯದ ವಿರುದ್ಧ ಜಯ ಸಾಧಿಸಿ, ಸರಣಿಯಲ್ಲಿ ಮೊದಲ ಗೆಲುವು ದಾಖಲಿಸಿತ್ತು. ಆದರೆ ಬಳಿಕ ರವಿವಾರ ನಡೆದ ಕಾಮನ್‌ವೆಲ್ತ್ ಬ್ಯಾಂಕ್ ತ್ರಿಕೋನ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಸೋಲು ಅನುಭವಿಸಿತು.

ಕಳೆದ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಬುಧವಾರದ ಪಂದ್ಯದಲ್ಲಿ ಅಂತಿಮ ಹನ್ನೊಂದರ ಬಳಗದಲ್ಲಿ ಅವರು ಆಡುವ ನಿರೀಕ್ಷೆ ಇದೆ. ಇವರು ತಂಡಕ್ಕೆ ಮರಳುವಾಗ ಅಗ್ರ ಸರದಿಯ ದಾಂಡಿಗರಾದ ಸಚಿನ್ ತೆಂಡುಲ್ಕರ್ ಅಥವಾ ಗೌತಮ್ ಗಂಭೀರ್ ಅವರಲ್ಲಿ ಒಬ್ಬರು ಸ್ಥಾನ ಬಿಟ್ಟುಕೊಡಬೇಕಾಗುತ್ತದೆ.

ಆಸ್ಟ್ರೇಲಿಯದಲ್ಲಿ ಉಭಯ ತಂಡಗಳು ಐದು ಬಾರಿ ಮುಖಾಮುಖಿ ಆಗಿದೆ. ಭಾರತ 2ರಲ್ಲಿ ಜಯಿಸಿದೆ. 1ಪಂದ್ಯದಲ್ಲಿ ಸೋತಿದೆ. ಎರಡು ಪಂದ್ಯಗಳು ಫಲಿತಾಂಶವಿಲ್ಲದೆ ರದ್ದಾಗಿದೆ. ವಾಕಾ ಕ್ರೀಡಾಂಗಣದಲ್ಲಿ ಕಳೆದ ತಿಂಗಳು ನಡೆದ ಮೂರನೆ ಟೆಸ್ಟ್‌ನಲ್ಲಿ ಆಸ್ಟ್ರೇಲಿಯದ ವಿರುದ್ಧ ಭಾರತ ಐದು ದಿನಗಳ ಟೆಸ್ಟ್ ಮುಗಿಯಲು ಎರಡೂವರೆ ದಿನ ಬಾಕಿ ಇದ್ದಾಗಲೆ ಸೋತು ಗಂಟುಮೂಟೆ ಕಟ್ಟಿತ್ತು.

ಹಾಗೆ ನೋಡಿದರೆ ಪರ್ತ್‌ನಲ್ಲಿ ಭಾರತಕ್ಕೆ ಸೋಲು ಕಟ್ಟಿಟ್ಟ ಬುತ್ತಿ ಎನ್ನುವಂತಿಲ್ಲ. 1980ರ ಬಳಿಕ ಆಡಿರುವ 8 ಪಂದ್ಯಗಳಲ್ಲಿ 3ರಲ್ಲಿ ಗೆಲುವು ಸಾಧಿಸಿತ್ತು. ಐದು ಪಂದ್ಯಗಳಲ್ಲಿ ಸೋಲು ಅನುಭವಿಸಿತ್ತು. ನ್ಯೂಝಿಲೆಂಡ್ ವಿರುದ್ಧದ ತ್ರಿಕೋನ ಸರಣಿಯ ಪಂದ್ಯದಲ್ಲಿ ಐದು ರನ್‌ಗಳ ಜಯ ದಾಖಲಿಸಿತ್ತು.
ಉಪಖಂಡದ ಎರಡು ಬಲಿಷ್ಠ ತಂಡಗಳ ನಡುವಿನ ಹೋರಾಟ ಕುತೂಹಲ ಕೆರಳಿಸಿದೆ. ಶ್ರೀಲಂಕಾ ತಂಡದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಯುವ ಆಟಗಾರರು ಇದ್ದಾರೆ.

ಲಂಕಾ ತಂಡದಲ್ಲಿರುವ 22ರ ಹರೆಯದ ಆಟಗಾರರಾದ ದಿನೇಶ್ ಚಂಡಿಮಾಲ್, ಲಹಿರು ತಿರಿಮನ್ನೆ ಮತ್ತು ತಿಸರ ಪೆರೆರ ಕಠಿಣ ಸವಾಲನ್ನು ಬೆನ್ನಟ್ಟಿ ತಂಡಕ್ಕೆ ರೋಚಕ ಗೆಲುವು ತಂದುಕೊಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಕಳೆದ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡು ಪಂದ್ಯಗಳಲ್ಲಿ ಅವರು ಇಂತಹ ಅಪೂರ್ವ ಪ್ರದರ್ಶನ ನೀಡಿದ್ದಾರೆ.
 

ಚಂಡಿಮಾಲ್‌ಎರಡು ವರ್ಷಗಳ ಹಿಂದೆ ಝಿಂಬಾಬ್ವೆಯಲ್ಲಿ ನಡೆದ ತ್ರಿಕೋನ ಸರಣಿಯಲ್ಲಿ ಶತಕ ಸಿಡಿಸಿದ್ದರು. ಎಡಗೈ ಬ್ಯಾಟ್ಸ್‌ಮನ್ ಮತ್ತು ಬಲಗೈ ಮಧ್ಯಮ ವೇಗಿ ತಿಸರ ಪೆರೆರ ಅವರ ಆಕ್ರಮಣಕಾರಿ ಬ್ಯಾಟಿಂಗ್ ನೆರವಿನಲ್ಲಿ ಶ್ರೀಲಂಕಾ ತಂಡ ಮೀರ್ಪುರದಲ್ಲಿ ನಡೆದ ಭಾರತ ತಂಡದ ವಿರುದ್ಧದ ಪಂದ್ಯದಲ್ಲಿ ಗೆಲುವು ದಾಖಲಿಸಿತ್ತು. ಪೆರೆರ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ 15 ಎಸೆತಗಳಲ್ಲಿ 6 ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಲ್ಲಿ 36 ರನ್ ಬಾರಿಸಿ ಗಮನ ಸೆಳೆದಿದ್ದರು.
ಲಹಿರು ತಿರುಮನ್ನೆ ಲಂಕಾದ ಯುವ ಬ್ಯಾಟ್ಸ್‌ಮನ್ ಆಗಿ ಗಮನ ಸೆಳೆಯುವ ಪ್ರದರ್ಶನ ನೀಡಿದ್ದಾರೆ. ತಂಡದ ನಾಯಕತ್ವವನ್ನು ಮಹೇಲ ಜಯವರ್ಧನೆ ವಹಿಸಿಕೊಂಡಿದ್ದಾರೆ.

ಭಾರತ: ಮಹೇಂದ್ರ ಸಿಂಗ್ ಧೋನಿ(ನಾಯಕ), ಗೌತಮ್ ಗಂಭೀರ್, ವೀರೇಂದ್ರ ಸೆಹ್ವಾಗ್, ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ, ಸುರೇಶ್ ರೈನಾ, ರೋಹಿತ್ ಶರ್ಮ, ರವಿಚಂದ್ರನ್ ಅಶ್ವಿನ್, ರಾಹುಲ್ ಶರ್ಮ, ಪ್ರವೀಣ್ ಕುಮಾರ್, ಆರ್.ವಿನಯ್ ಕುಮಾರ್ ಮತ್ತು ಝಹೀರ್ ಖಾನ್.

 ಶ್ರೀಲಂಕಾ ತಂಡ: ಮಹೇಲ ಜಯವರ್ಧನೆ (ನಾಯಕ), ಏಂಜೆಲೊ ಮ್ಯಾಥ್ಯೂಸ್, ಕುಮಾರ ಸಂಗಕ್ಕರ, ತಿಲಕರತ್ನೆ ದಿಲ್ಶನ್, ಫರ್ವೆಝ್ ಮಹಾರೋಪ್, ಲಸಿತ್ ಮಾಲಿಂಗ್, ದಿನೇಶ್ ಚಂಡಿಮಾಲ್, ತಿಸರ ಪೆರೆರ, ಸಚಿತ್ರ ಸೇನನಾಯಕೆ, ಲಹಿರು ತಿರುಮನ್ನೆ, ಉಪುಲ್ ತರಂಗ, ಚಾಣಕ ವೆಲ್‌ಗೆಡರ, ಧಮ್ಮಿಕ ಪ್ರಸಾದ್, ತಿಲಾನ್ ಸಮರವೀರ, ರಂಗನ ಹೆರಾತ್ ಮತ್ತು ನುವಾನ್ ಕುಲಶೇಖರ.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಶಿಲಾಯುಗದ ಸಂಸ್ಕೃತಿ

ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...


ನಿಮ್ಮ ಅನಿಸಿಕೆ

postClick here to post your views
EPAPER
access

ಪ್ರಜೆಗಳ ಕೊರಳು ಹಿಸುಕುವ ಪ್ರಭುತ್ವ

ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...


- ಸನತ್‌ಕುಮಾರ ಬೆಳಗಲಿ

ವ್ಯಂಗ್ಯಚಿತ್ರ ನಿಷೇಧದ ಕುರಿತು ಪ್ರಗತಿಪರರ ನಿಲುವಿಗೆ ಒಂದು ಪ್ರತಿಕ್ರಿಯೆ

ಈ  ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...


- ಮಹಾದೇವ ಹಡಪದ

ಅಂಕಪಟ್ಟಿ ಜೀವನಕ್ಕೆ ಅಂಕದ ಪರದೆ ಎಳೆಯದಿರಲಿ

ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...


- ಜ್ಯೋತಿ ಗುರುಪ್ರಸಾದ್

ಆ ಹುಡುಗಿಯರಲ್ಲಿ ತಾಯ್ತನದ ಹೆಚ್ಚುಗಾರಿಕೆ

ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...


- ಶೂದ್ರ ಶ್ರೀನಿವಾಸ್

ವ್ಯಂಗ್ಯವಿರುವುದು ಇಂದಿನ ಸಂದರ್ಭದಲ್ಲಿ..;ಭಾಗ-1

ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...


- ಶಿವಸುಂದರ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ;ಭಾಗ-7

ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್‌ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-6

ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-5

ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...


- ರಾಕೇಶ್ ಅಂಕಿತ್