mail-img print-img

ರೈಲ್ವೆ ಟಿಕೆಟ್ ಕಾದಿರಿಸುವಿಕೆ ಅವಧಿ 120 ದಿನಗಳವರೆಗೆ ವಿಸ್ತರಣೆ

ಬುಧವಾರ - ಫೆಬ್ರವರಿ -08-2012

ಹೊಸದಿಲ್ಲಿ, ಫೆ. 7: ಟಿಕೆಟ್‌ಗಳ ಬೇಡಿಕೆಯ ಒತ್ತಡವನ್ನು ಸರಿಯಾಗಿ ನಿಭಾಯಿಸುವ ನಿಟ್ಟಿನಲ್ಲಿ ರೈಲ್ವೆಯು, ಇದೀಗ ಮುಂಗಡ ಕಾದಿರಿಸುವಿಕೆಯ ಅವಧಿಯನ್ನು 90 ದಿನಗಳಿಂದ 120 ದಿನಗಳಿಗೆ ವಿಸ್ತರಿಸಲು ನಿರ್ಧರಿಸಿದೆ. ಮುಂಬರುವ ಮಾರ್ಚ್ 10ರಿಂದ ಈ ನೂತನ ನಿಯಮ ಜಾರಿಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

‘‘ಇನ್ನು ಮುಂದೆ ಪ್ರಯಾಣಿಕನೊಬ್ಬನು 120 ದಿನಗಳಿಗೆ ಮುಂಚಿತವಾಗಿಯೇ ತನ್ನ ಪ್ರಯಾಣದ ಟಿಕೆಟ್‌ನ್ನು ಕಾದಿರಿಸಬಹುದಾದ ನಿಯಮವನ್ನು ಜಾರಿಗೊಳಿಸಲು ನಾವು ನಿರ್ಧರಿಸಿದ್ದೇವೆ. ತನ್ನ ಪ್ರಯಾಣವನ್ನು ಸುಗಮಗೊಳಿಸುವುದಕ್ಕೋಸ್ಕರ ಪ್ರಯಾಣಿಕನಿಗೆ ನಾಲ್ಕು ತಿಂಗಳಿಗೆ ಮುಂಚಿತವಾಗಿಯೇ ಟಿಕೆಟ್ ಕಾದಿರಿಸಬಹುದಾದ ಸೌಲಭ್ಯ ದೊರೆಯಲಿದೆ’’ ಎಂದು ರೈಲ್ವೆ ಸಚಿವಾಲಯದ ವಾಣಿಜ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಉದ್ದೇಶಕ್ಕಾಗಿ ರೈಲ್ವೆ ಮಾಹಿತಿ ವ್ಯವಸ್ಥೆ ಕೇಂದ್ರದಲ್ಲಿ ಆವಶ್ಯಕ ಬದಲಾವಣೆಗಳನ್ನು ತರಲಿದೆ ಎಂದು ಅವರು ತಿಳಿಸಿದ್ದಾರೆ.

ಆದಾಗ್ಯೂ, ಕಡಿಮೆ ದೂರದ ರೈಲುಗಳಾದ ತಾಜ್ ಎಕ್ಸ್‌ಪ್ರೆಸ್ ಮತ್ತು ಗೋಮತಿ ಎಕ್ಸ್‌ಪ್ರೆಸ್‌ನಂತಹ ರೈಲುಗಳಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ. ಈ ರೈಲುಗಳಿಗೆ ಮುಂಗಡ ಕಾದಿರಿಸುವಿಕೆ 15 ದಿನಗಳು ಮಾತ್ರ ಇರುತ್ತವೆ. ಇದು ಬದಲಾವಣೆಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ವಿದೇಶಿ ಪ್ರವಾಸಿಗರಿಗೆ ಮುಂಗಡ ಟಿಕೆಟ್ ಕಾದಿರಿಸುವಿಕೆಯಲ್ಲೂ ಯಾವುದೇ ಬದಲಾವಣೆಯಿಲ್ಲ. ಅವರ ಕಾದಿರಿಸುವಿಕೆಯ ಅವಧಿ 360 ದಿನಗಳಿಗೆ ಇರುವುದರಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಅಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಶಿಲಾಯುಗದ ಸಂಸ್ಕೃತಿ

ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...


ನಿಮ್ಮ ಅನಿಸಿಕೆ

postClick here to post your views
EPAPER
access

ಪ್ರಜೆಗಳ ಕೊರಳು ಹಿಸುಕುವ ಪ್ರಭುತ್ವ

ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...


- ಸನತ್‌ಕುಮಾರ ಬೆಳಗಲಿ

ವ್ಯಂಗ್ಯಚಿತ್ರ ನಿಷೇಧದ ಕುರಿತು ಪ್ರಗತಿಪರರ ನಿಲುವಿಗೆ ಒಂದು ಪ್ರತಿಕ್ರಿಯೆ

ಈ  ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...


- ಮಹಾದೇವ ಹಡಪದ

ಅಂಕಪಟ್ಟಿ ಜೀವನಕ್ಕೆ ಅಂಕದ ಪರದೆ ಎಳೆಯದಿರಲಿ

ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...


- ಜ್ಯೋತಿ ಗುರುಪ್ರಸಾದ್

ಆ ಹುಡುಗಿಯರಲ್ಲಿ ತಾಯ್ತನದ ಹೆಚ್ಚುಗಾರಿಕೆ

ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...


- ಶೂದ್ರ ಶ್ರೀನಿವಾಸ್

ವ್ಯಂಗ್ಯವಿರುವುದು ಇಂದಿನ ಸಂದರ್ಭದಲ್ಲಿ..;ಭಾಗ-1

ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...


- ಶಿವಸುಂದರ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ;ಭಾಗ-7

ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್‌ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-6

ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-5

ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...


- ರಾಕೇಶ್ ಅಂಕಿತ್